ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320 ರು ಗೇರಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟುತುಟ್ಟಿ ಭತ್ಯೆ ಸಿಗಲಿದೆ. ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎಹಾಗೂ ತುಟ್ಟಿ ದರ (ಡಿಆರ್)ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ.ಈಗ ಡಿಆರ್ ಶೇ17ರಷ್ಟಾಗಲಿದೆ.
ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಕನಿಷ್ಟ ವೇತನವನ್ನು 18,000 ದಿಂದ26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರುನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.