inspirational, ಸುದ್ದಿ

ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

183

ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ.

ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡವರು. ಹೌದು, ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದಿರುವ ಅಜಯ್ ರಾಯ್‍ ಎಬಿವಿಪಿಯಿಂದ ಬಂದವರು.

ಹೋರಾಟದ ಮೂಲಕ ಗುರುತಿಸಿಕೊಂಡ ಇವರಿಗೆ 1996 ರಿಂದ 2007 ರವರೆಗೆ ಬಿಜೆಪಿ ಟಿಕೆಟ್‍ ಕೊಟ್ಟು ಶಾಸಕರನ್ನಾಗಿ ಮಾಡಿತ್ತು. ಆದ್ರೆ 2007 ರಲ್ಲಿ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಬೇಸರಗೊಂಡ ಅಜಯ್‍ ರಾಯ್‍ ಸಮಾಜವಾದಿ ಪಕ್ಷಕ್ಕೆ ಹಾರಿದ್ರು. ನಂತರ 2009 ರಲ್ಲಿ ಮುರುಳಿ ಮನೋಹರ್ ಜೋಷಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಬಳಿಕ 2012 ರಲ್ಲಿ ಎಸ್‍ಪಿ ಬಿಟ್ಟು ಕಾಂಗ್ರೆಸ್ ಸೇರಿದ್ರು. ಇದೀಗ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….