ರಾಜಕೀಯ

ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

By admin

March 26, 2019

ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ.

‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ.

ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ ಭಕ್ತರು ಈಗ ಅಲ್ಲಿ ಹೋಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸ್ವಾಭಿಮಾನಿಯಾಗಿ ನಿಲ್ಲಿಸಿ ಗೆಲ್ಲಿಸಿ ಎಂದು ಮೋದಿ ಅಭಿಮಾನಿಗಳಿಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುತ್ತಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ಸಿಗದ್ದಕ್ಕೆ ಬಿಜೆಪಿ ಅಭಿಮಾನಿಗಳು ದೇವೇಗೌಡರ ಕುಟುಂಬ ಮತ್ತು ಕಾಂಗ್ರೆಸ್ ಅವರನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೇ ಅಂಬರೀಶ್ ಕಲಾ ಸೇವೆಯನ್ನು ಮೆಚ್ಚಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಹೇಳಿಕೆ ನೀಡಿತ್ತು.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜ್ಯ ಬಿಜೆಪಿ ನಾಯಕರು ತೇಜಸ್ವಿನಿ ಅವರನ್ನು ಬೆಂಬಲಿಸದ ಪರಿಣಾಮ ಕೊನೆ ಕ್ಷಣದವರೆಗೂ ಅವರಿಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಕೊನೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಕ್ಕೆ, ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ನೀವು ಸ್ವಾಭಿಮಾನಿಗಳಾಗಿದ್ದರೆ ತೇಜಸ್ವಿನಿ ಅವರನ್ನು ನಿಲ್ಲಿಸಿ ಗೆಲ್ಲಿಸಿ ನೋಡೋಣ ಎಂದು ಮೋದಿ ಪ್ರಧಾನಿ ಅಭಿಮಾನಿಗಳಿಗೆ ಸವಾಲ್ ಎಸೆದಿದ್ದಾರೆ.