ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ.
ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ. ರಸ್ತೆಯಲ್ಲಿಯೇ ವಾಕಿಂಗ್ ಮಾಡಿ ಬರ್ತಾರೆ. ಆದ್ರೆ ವಾಹನದ ಹೊಗೆ ಬೆಳ್ಳಂಬೆಳಿಗ್ಗೆ ನಮ್ಮ ದೇಹ ಸೇರುವುದ್ರಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗುತ್ತದೆ.
ಸೂರ್ಯೋದಯಕ್ಕಿಂತ ಮೊದಲು ಮಾಡುವ ವಾಕಿಂಗ್ ಹೆಚ್ಚು ಪ್ರಯೋಜನಕಾರಿ. ಯಾಕೆಂದ್ರೆ ಈ ವೇಳೆ ಮಾಲಿನ್ಯ ಕಡಿಮೆಯಿರುತ್ತದೆ. ಬೆಳಿಗ್ಗೆ ಬೇಗ ಏದ್ದು ವಾಕಿಂಗ್ ಗೆ ಹೋಗ ಬಯಸುವವರು ರಾತ್ರಿ ಬೇಗ ಮಲಗಬೇಕು. ಪ್ರತಿದಿನ ಮಲಗುವ ಹಾಗೂ ಏಳುವ ಸಮಯ ಸರಿಯಾಗಿದ್ದಲ್ಲಿ ನಿದ್ರೆ ಸರಿಯಾಗಿ ಬರುತ್ತದೆ.
ವಾಕಿಂಗ್ ಗೆ ಸೂಕ್ತ ಬಟ್ಟೆ ಹಾಗೂ ಬೂಟ್ ಆಯ್ಕೆ ಮಾಡಿಕೊಳ್ಳಿ. ವಾಕಿಂಗ್ ಮಾಡುವ ವೇಳೆ ಕಿರಿಕಿರಿ ಎನ್ನಿಸುವ ಬಟ್ಟೆ ತೊಡಬೇಡಿ. ಇದ್ರ ಜೊತೆಗೆ ಕೇವಲ ವಾಕಿಂಗ್ ಗಾಗಿಯೇ ಶೂ ಒಂದನ್ನು ಮೀಸಲಿಡಿ.
ಕೆಲವರು ವಾಕಿಂಗ್ ಮಧ್ಯೆಯೇ ನೀರು ಕುಡಿಯುತ್ತಾರೆ. ಇದು ತಪ್ಪು ವಿಧಾನ. ವಾಕಿಂಗ್ ಗೆ ಹೋಗುವ ಮುನ್ನ 2-3 ಗ್ಲಾಸ್ ನೀರು ಕುಡಿಯಿರಿ. ವಾಕಿಂಗ್ ಮುಗಿದ ನಂತ್ರ ಸ್ವಲ್ಪ ಸಮಯ ಬಿಟ್ಟು ನೀರು ಕುಡಿಯುವುದು ಒಳ್ಳೆಯ ಪದ್ಧತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…