ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

590

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ