ಸುದ್ದಿ

ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

272

ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ.

ಧೋನಿ ಪತ್ನಿ ಕಾಲಿಗೆ ಚಪ್ಪಲಿ ಹಾಕುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಧೋನಿ ತಮ್ಮ ಕಾಲಿಗೆ ಚಪ್ಪಲಿ ಧರಿಸುತ್ತಿರುವ ಫೋಟೋಗಳನ್ನು ಸ್ನತಃ ಪತ್ನಿ ಸಾಕ್ಷಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, `

ನೀವು ಚಪ್ಪಲಿಗಳಿಗೆ ಹಣ ಕೊಟ್ಟಿದ್ದೀರಿ, ಆದ್ದರಿಂದ ನೀವೇ ತೊಡಿಸಿ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಮತ್ತೊಂದು ಪೋಸ್ಟ್ ನಲ್ಲಿ ತಮ್ಮ ಮಡದಿಗೆ ಧೋನಿ ಕೊಂಡ ಲೋಹದ ಬ್ಯಾಂಡ್ ಗೂ ಇದೇ ರೀತಿ ಬರೆದಿದ್ದು, ಸಿರೀಸ್ 2 ಎಂದು ಬರೆಯುವ ಮೂಲಕ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ