ಸುದ್ದಿ

ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

266

ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ.

ಧೋನಿ ಪತ್ನಿ ಕಾಲಿಗೆ ಚಪ್ಪಲಿ ಹಾಕುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಧೋನಿ ತಮ್ಮ ಕಾಲಿಗೆ ಚಪ್ಪಲಿ ಧರಿಸುತ್ತಿರುವ ಫೋಟೋಗಳನ್ನು ಸ್ನತಃ ಪತ್ನಿ ಸಾಕ್ಷಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, `

ನೀವು ಚಪ್ಪಲಿಗಳಿಗೆ ಹಣ ಕೊಟ್ಟಿದ್ದೀರಿ, ಆದ್ದರಿಂದ ನೀವೇ ತೊಡಿಸಿ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಮತ್ತೊಂದು ಪೋಸ್ಟ್ ನಲ್ಲಿ ತಮ್ಮ ಮಡದಿಗೆ ಧೋನಿ ಕೊಂಡ ಲೋಹದ ಬ್ಯಾಂಡ್ ಗೂ ಇದೇ ರೀತಿ ಬರೆದಿದ್ದು, ಸಿರೀಸ್ 2 ಎಂದು ಬರೆಯುವ ಮೂಲಕ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…