ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

By KOLAR NEWS CHANDRU

March 20, 2023

ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ಮುಬಾರಕ್ ಪಾಷಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.