ಸುದ್ದಿ

ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

70

ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ.

ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು.

ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆನ್ನಲಾಗಿದೆ. ಹೀಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ದೇವೇಗೌಡರ ಹಾದಿ ಸುಗಮವಾದಂತಾಗಿದೆ.

ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನವಾಗಿದ್ದ ಕಾರಣ ಮುದ್ದಹನುಮೇಗೌಡರನ್ನು ಭೇಟಿಯಾದ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್, ಮನವೊಲಿಕೆ ಬಳಿಕ ಮುದ್ದಹನುಮೇಗೌಡರ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಹೈಕಮಾಂಡ್ ಮಾತಿಗೆ ಮುದ್ದಹನುಮೇಗೌಡ ಮನ್ನಣೆ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮುದ್ದಹನುಮೇಗೌಡರು, ತಮ್ಮೊಂದಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ಕೂಡಾ ಮಾತನಾಡಿದ್ದು, ಜೊತೆಗೆ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಸಮಾಲೋಚನೆ ನಡೆಸಿದ್ದಾರೆ. ಹೀಗಾಗಿ ಈ ಎಲ್ಲ ವಿಷಯಗಳನ್ನು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಆ ಬಳಿಕ ನಾಮಪತ್ರ ಹಿಂಪಡೆಯುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಹುತೇಕ ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತವೆನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ