ಸುದ್ದಿ

ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

76

ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೌರವ್, ನನ್ನ ತಂದೆ ಕುಲ್ಟಿಯಲ್ಲಿ ನೌಕರಿ ಮಾಡುತ್ತಿದ್ದರು. 2014ರಲ್ಲಿ ತಂದೆಯ ನಿಧನದ ಬಳಿಕ ಅಮ್ಮ ಮನೆಯಲ್ಲಿ ಏಕಾಂಗಿಯಾಗಿದ್ದಾರೆ ಎಂಬುವುದು ನನ್ನ ಅಭಿಪ್ರಾಯ. ನಾನು ಬೆಳಗ್ಗೆ ಏಳು ಗಂಟೆಗೆ ಕೆಲಸಕ್ಕಾಗಿ ಮನೆಯಿಂದ ಹೋದರೆ ರಾತ್ರಿ ಹಿಂದಿರುಗುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಓರ್ವ ಗೆಳೆಯನ ಅವಶ್ಯಕತೆ ಇರುತ್ತದೆ. ಮದುವೆ ಬಗ್ಗೆ ಅಮ್ಮನ ಜೊತೆ ಮಾತನಾಡಿದ್ದೇನೆ. ಅಮ್ಮ ಸಹ ಈ ಕುರಿತು ಯೋಚನೆ ಮಾಡುತ್ತಿದ್ದಾರೆ. ಏಕಾಂಗಿಯಾಗಿರುವ ಅಮ್ಮನಿಗೆ ಸಂಗಾತಿ ಹುಡುಕುವುದು ನಮ್ಮ ಕರ್ತವ್ಯ. ಹಾಗಾಗಿ ಪೋಸ್ಟ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಇದನ್ನೂ ಓದಿ

ಜನರು ಬೆನ್ನ ಹಿಂದೆ ನೂರು ಮಾತನಾಡಬಹುದು. ಯಾರಿಗೂ ನನ್ನ ಮುಂದೆ ಮಾತನಾಡಲ್ಲ. ಸಮಾಜದಲ್ಲಿ ಮಾಡುವ ಪ್ರತಿಯೊಂದು ಕೆಲಸಗಳಿಗೆ ಕೊಂಕು ಮಾತನಾಡುವ ಜನ ಇರುತ್ತಾರೆ. ಹಾಗಾಗಿ ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಕೆಲವರು ಪ್ರಚಾರ ಪಡೆದುಕೊಳ್ಳಲು ಈ ರೀತಿಯ ಪೋಸ್ಟ್ ಮಾಡಿದ್ದೇನೆ ಎಂದು ಮಾತನಾಡಿಕೊಂಡಿದ್ದಾರೆ. ಮುಂದೆ ಮಾತನಾಡದೇ ಇರುವ ಜನರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಲವರು ಸಮಾಜಕ್ಕೆ ಹೆದರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಗೌರವ್ ಬೇಸರ ವ್ಯಕ್ತಪಡಿಸುತ್ತಾರೆ.

ಫೇಸ್‍ಬುಕ್ ನಲ್ಲಿ ನನ್ನ ಮನವಿ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಎಂಜಿನಿಯರ್, ಡಾಕ್ಟರ್ ಮತ್ತು ಶಿಕ್ಷಕರು ಸೇರಿದಂತೆ ಹಲವರು ತಮ್ಮ ಬಯೋಡೇಟಾ ಕಳುಹಿಸಿದ್ದಾರೆ. ಇವುಗಳಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಗೌರವ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…