ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಶತಾಬ್ದಿ ಆಸ್ಪತ್ರೆ, ಜೋಗೇಶ್ವರಿ ಆಸ್ಪತ್ರೆ, ಎಂ.ಡಬ್ಲೂ ದೇಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಶತಾಬ್ದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಮುಂಬೈ ನಗರದಲ್ಲಿ ದಶಕದಲ್ಲಿ ಅತಿ ಹೆಚ್ಚು ಮಳೆ ಬಿದ್ದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಇಂದು ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರೈಲ್ವೇ ಹಳಿಗಳ ಮೇಲೂ ನೀರು ನಿಂತಿರುವ ಕಾರಣಕ್ಕೆ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.ಮಳೆರಾಯನ ಅಬ್ಬರಕ್ಕೆ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂದಿದೆ. ಇಡೀ ಮುಂಬೈ ನಗರವೇ ಮಳೆಗೆ ಜಲಾವೃತವಾಗಿದ್ದು, ಹಲವೆಡೆ ಮನೆಗಳ ಒಳಗೆ ಕೂಡ ನೀರು ನುಗ್ಗಿದೆ. ಅಲ್ಲದೆ ಮಿತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನದಿ ನೀರು ಆಸುಪಾಸಿನ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಅಲ್ಲಿನ ಕಟ್ಟಡಗಳ ಕೆಳ ಮಹಡಿ ಸಂಪೂರ್ಣ ಜಲಾವೃತಗೊಳ್ಳುವ ಮಟ್ಟಿಗೆ ನೀರು ತುಂಬಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…