ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ.

ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ ವಿಧಾನದ ಬದಲು ಉಪಗ್ರಹ ಮಾಹಿತಿ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ನೆರವಿನಿಂದ ಸಮುದ್ರ ನೀರಿನ ಮಟ್ಟವನ್ನು ಅಳೆದು ಭೂಮುಳುಗಡೆಯ ಪ್ರಮಾಣವನ್ನು ಹೆಚ್ಚು ಕರಾರುವಾಕ್ಕಾಗಿ ಅಂದಾಜು ಮಾಡಿದ್ದಾರೆನ್ನಲಾಗಿದೆ.

ಭಾರತದ ವಾಣಿಜ್ಯ ರಾಜಧಾನಿ ಎನ್ನಲಾದ ಹಾಗೂ ವಿಶ್ವದ ಬೃಹತ್ ನಗರಗಳಲ್ಲೊಂದೆನಿಸಿದ ಮುಂಬೈನ ಬಹುತೇಕ ಭೂಪ್ರದೇಶವು ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಈ ಸಂಶೋಧಕರು ಎಚ್ಚರಿಸಿದ್ದಾರೆ. ಮುಂಬೈ ಅಷ್ಟೇ ಅಲ್ಲ, ವಿಯೆಟ್ನಾಮ್ನ ಹೋ ಚಿ ಮಿನ್ ನಗರ, ಥಾಯ್ಲೆಂಡ್ನ ಬ್ಯಾಂಕಾಕ್, ಚೀನಾದ ಶಾಂಘೈ, ಈಜಿಪ್ಟ್ನ ಅಲೆಕ್ಸಾಂಡ್ರಿಯಾ,ಇರಾಕ್ನ ಬಾಸ್ರಾ ಮೊದಲಾದ ನಗರಗಳು ಮುಳುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.
ಸಮುದ್ರದ ದಡದಲ್ಲಿ ಮರಗಳು ಮತ್ತು ಕಟ್ಟಡಗಳು ಇರುವ ಕಾರಣ ಭೂಮಿಯ ನಿಜವಾದ ಎತ್ತರವನ್ನು ಕಂಡುಕೊಳ್ಳುವುದು ಕಷ್ಟವಾಯಿತು ಎಂದು ಸಂಶೋಧನಾ ತಂಡದ ಸದಸ್ಯನಾದ ಸ್ಕಾಟ್ ಎ. ಕುಲ್ಪ್ ತಿಳಿಸಿದ್ದಾರೆ. ಸಂಶೋಧನೆ ಪ್ರಕಾರ 2050ರ ವೇಳೆಗೆ ಸಮುದ್ರ ದಡದಲ್ಲಿ ವಾಸವಾಗಿರುವ 15 ಕೋಟಿ ಜನರು ತಮ್ಮ ಮನೆ ಕಳೆದುಕೊಳ್ಳಲಿದ್ದಾರೆ. ಕಾರಣ ಈ ಪ್ರದೇಶ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ಹೋಗಲಿದೆ.

ಈ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ ಪುನರ್ವಸತಿ ಕಲ್ಪಿಸಬೇಕಾಗುತ್ತದೆ. ಕೋಟ್ಯಂತರ ಜನರು ಬೇರೊಂದು ಪ್ರದೇಶಗಳಿಗೆ ಗುಳೆ ಹೋದಾಗ ಅನೇಕ ರೀತಿಯ ಸಮಸ್ಯೆಗಳು ಉದ್ಭವಿಸಬಹುದು. ಸಾಮಾಜಿಕ ಮತ್ತು ರಾಜಕೀಯ ಅಭದ್ರತೆ ಕಾಡಬಹುದು. ನೆಲಕ್ಕಾಗಿ, ವಸಾಹತಿಗಾಗಿ ಸಶಸ್ತ್ರ ಸಂಘರ್ಷ, ಭಯೋತ್ಪಾದನೆ ಚಟುವಟಿಕೆ ಹೆಚ್ಚಾಗಬಹುದು. ಇದು ಹವಾಮಾನ ಸಂಬಂಧಿತ ಅಪಾಯಕ್ಕಿಂತಲೂ ಹೆಚ್ಚು ತೀವ್ರ ಮಟ್ಟದ್ದು ಎಂದು ಮತ್ತೊಂದು ಸಂಶೋಧಕರ ತಂಡವು ಆತಂಕ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…