ರಾಜಕೀಯ

ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

45

‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.

‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್‌ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.

‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್‌ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.

ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…