ಸುದ್ದಿ

ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

73

ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್‍ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.

ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ. 
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ. 
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.