ಸುದ್ದಿ

ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

29

ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ.

ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ರೈತ ಸುಮೇರ್ ಸಿಂಗ್ ಪತ್ರಕ್ಕೆ ಪ್ರಧಾನಿಗಳ ಕಾರ್ಯಾಲಯ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಗಳ ರಾಷ್ಟ್ರಿಯ ಪರಿಹಾರ ನಿಧಿಯಿಂದ 30 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ.

ಚಿಕಿತ್ಸೆಗೆ ಅಪರೇಷನ್ ಅಗತ್ಯವಿದ್ದು, ಜೈಪುರ ಆಸ್ಪತ್ರೆ ಸುಮಾರು 10 ಲಕ್ಷ ರೂ.ಗಳನ್ನು ಆಗುತ್ತದೆ ಎಂದು ತಿಳಿಸಿದೆ. ರೈತನ ಮಗಳು ಅಪ್ಲ್ಯಾಸ್ಟಿಕ್ ಅನಿಮಿಯಾ (ರಕ್ತಹೀನತೆ) ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯ ದೇಹದಲ್ಲಿ ಹೊಸ ರಕ್ತಗಳ ಉತ್ಪಾದನೆ ಆಗದಿರುವುದರಿಂದ ಆಕೆಗೆ ಮೂಳೆ ಮಜ್ಜೆಯ ಕಸಿ ಅಗತ್ಯವಿದೆ. ಈ ಆಪರೇಷನ್‍ಗಾಗಿಯೇ 10 ಲಕ್ಷ ರೂ. ಗಳನ್ನು ರೈತ ಪಾವತಿ ಮಾಡಬೇಕಿತ್ತು.

ಅಪ್ಲ್ಯಾಸ್ಟಿಕ್ ಅನಿಮಿಯಾ ಎಂಬುವುದು ದೇಹ ಹೊಸ ರಕ್ತಕಣಗಳನ್ನು ಉತ್ಪಾದಿಸುವುದನ್ನು ನಿಲ್ಲಿಸಿದಾಗ ಉಂಟಾಗುವ ಸ್ಥಿತಿಯಾಗಿದೆ. ಈ ವೇಳೆ ಹೆಚ್ಚಿನ ರಕ್ತಸ್ರಾವ, ಸೋಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಬಹುಬೇಗ ಚಿಕಿತ್ಸೆ ಲಭ್ಯವಾಗದಿದ್ದರೆ ರೋಗಿ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…