ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.
1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.
ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.
ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.
ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.