ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ.
ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ ಮೊತ್ತದ ದಂಡ ಜಾರಿಯಾಗುತ್ತಿದ್ದಂತೆ ವಿರೋಧಗಳು ಕೇಳಿ ಬಂದಿತ್ತು. ಇದರಲ್ಲಿ ಪ್ರಮುಖವಾಗಿ ಹಾಳಾದ, ಗುಂಡಿ ಬಿದ್ದ ರಸ್ತೆ ಸರಿಮಾಡಿ ನಿಯಮ ಜಾರಿ ಮಾಡಿ ಅನ್ನೋ ಕೂಗು ಕೂಡ ಕೇಳಿ ಬಂದಿತ್ತು. ಇದೀಗ ಗೋವಾದಲ್ಲಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.
ಹೊಸ ಟ್ರಾಫಿಕ್ ನಿಯಮ ಜಾರಿ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಗೋವಾದಲ್ಲಿ ರಸ್ತೆಗಳು ಸಂಪೂರ್ಣ ರಿಪೇರಿ ಮಾಡಿದ ಬಳಿಕಷ್ಟೇ ನೂತನ ಟ್ರಾಫಿಕ್ ನಿಯಮ ಜಾರಿಯಾಗಲಿದೆ ಎಂದಿದ್ದಾರೆ. ಹಾಳಾದ, ಗುಂಡಿ ಬಿದ್ದ ರಸ್ತೆಗಳಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆ ಸರಿಯಿಲ್ಲದಿದ್ದರೆ, ಸವಾರರಿಂದ ದುಬಾರಿ ಮೊತ್ತ ಪಡೆಯುವುದು ಸಮಂಜಸವಲ್ಲ. ಹೀಗಾಗಿ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿಯಾಗಲಿದೆ ಎಂದು ಗೋವಾ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಪ್ರತಿಪಕ್ಷಗಳು ನೂತನ ಟ್ರಾಫಿಕ್ ನಿಯಮ ಜಾರಿಗೆ ವಿರೋಧ ವ್ಯಕ್ತಪಡಿಸಿತ್ತು. ಇಷ್ಟೇ ಅಲ್ಲ ರಸ್ತೆ ರಿಪೇರಿಗೆ ಆಗ್ರಹಿಸಿತ್ತು. ಇದೀಗ ಪ್ರತಿಪಕ್ಷಗಳ ಸಲಹೆ ಪಡೆದಿರುವ ಗೋವಾ ಸಿಎಂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
15 ರಿಂದ 20 ದಿನಗಳ ಒಳಗೆ ರಸ್ತೆ ರಿಪೇರಿ ಮಾಡುವಂತೆ PWD ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ. ಎಂಜೀನಿಯರ್ಗಳು ಖುದ್ದು ನಿಂತು ರಿಪೇರಿ ಮಾಡಿಸಲು ಸೂಚಿಸಿದ್ದಾರೆ. ಇನ್ನು ಡಿಸೆಂಬರ್ನಲ್ಲಿ ರಸ್ತೆ ರಿಪೇರಿ ಪರಾಮರ್ಶಿಸಿ ಹೊಸ ನಿಯಮ ಜಾರಿಗೊಳಿಸಲಾಗುವುದು ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ. ಗೋವಾ ಮುಖ್ಯಮಂತ್ರಿ ಆದೇಶದಿಂದ ಗೋವಾ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕನಿಷ್ಠ 3 ತಿಂಗಳ ಕಾಲ ಗೋವಾದಲ್ಲಿ ಹೊಸ ಟ್ರಾಫಿಕ್ ನಿಯಮ ಅನ್ವಯವಾಗೋದಿಲ್ಲ.
ಗೋವಾ ಮುಖ್ಯಮಂತ್ರಿ ಆದೇಶದ ಬೆನ್ನಲ್ಲೇ ಕರ್ನಾಟಕದಲ್ಲೂ ಇದೇ ರೀತಿ ಅನುಸರಿಸಲು ಒತ್ತಾಯ ಕೇಳಿಬರುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ರಸ್ತೆಗಳು ಸರಿಪಡಿಸಿದ ಬಳಿಕವಷ್ಟೇ ಹೊಸ ನಿಯಮ ಜಾರಿ ಮಾಡಿ. ಸದ್ಯ ಜಾರಿಯಾಗಿರುವ ನೂತನ ನಿಯಮ ಹಿಂಪಡೆಯಿರಿ ಅನ್ನೋ ಕೂಗು ಕೇಳಿಬರುತ್ತಿದೆ.ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಗಳು ಆರಂಭವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…