ಸುದ್ದಿ

ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

163

ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ ಮೇಲೆಯೇ ವಿಕೃತಿ ಮೆರೆದಿದ್ದಾನೆ. ಲೈಂಗಿಕ ಕಿರುಕುಳ ನೀಡಲು ಶುರು ಮಾಡಿದ್ದನು.

ಮಗಳಿಗೆ ಪೋರ್ನ್ ಚಿತ್ರಗಳನ್ನು ತೋರಿಸಿ ಅತ್ಯಾಚಾರ ನಡೆಸುತ್ತಿದ್ದನು. ಅಲ್ಲದೆ ಅತ್ಯಾಚಾರದ ನಂತರ ಮಗಳಿಗೆ ಹಣ ನೀಡಿ ಬಾಯಿ ಮುಚ್ಚಿಸುತ್ತಿದ್ದನು. ಆದರೆ ಬಾಲಕಿಗೆ 15 ವರ್ಷ ತುಂಬಿ ತಿಳುವಳಿಕೆ ಬಂದ ನಂತರ ತಂದೆ ನೀಡುತ್ತಿದ್ದ ಲೈಂಗಿಕ ಕಿರುಕುಳದ ಅರಿವಾಗಿದೆ. ಆಗ ಆಕೆ ತನ್ನ ಸ್ನೇಹಿತರಿಗೆ ತಂದೆ ಕ್ರೌರ್ಯವನ್ನು ಹೇಳಿದ್ದಾಳೆ. ಈ ಬಗ್ಗೆ ಪೊಲೀಸರಿಗೂ ಕೂಡ ಬಾಲಕಿ ದೂರು ನೀಡಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣ ಬೆಳಕಿಗೆ ಬಂದಂತೆ ಪೊಲೀಸರು ತಂದೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಬಳಿಕ ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಕಾಮುಕ ತಂದೆಗೆ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ವಿರೋಧಿಸಿ ತಂದೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. ಆದರೆ ಕೋರ್ಟ್ ಮೇ 10ರಂದು ಅರ್ಜಿಯನ್ನು ತಿರಸ್ಕರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ