ಸುದ್ದಿ

ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

72

ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ.

ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ.

ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ. ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.

ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಪ್ರಕಟಿಸಿದ್ದಾರೆ.

ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ