ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು.

ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ.
ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ನಿವೃತ್ತ ಡಿಜಿ ಐಜಿಪಿ ನೀಲಮಣಿ ಎನ್. ರಾಜು, ಮಾಜಿ ಡಿಸಿಎಂ ಜಿ ಪರಮೇಶ್ವರ್, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಶಾಸಕ ಎಂ. ಕೃಷ್ಣಪ್ಪ ದಂಪತಿ, ಮಾಜಿ ಶಾಸಕ ಪ್ರಿಯಕೃಷ್ಣ ಕುಟುಂಬ ಮತ್ತಿತರ ಗಣ್ಯರು ಸಾಕ್ಷಿಯಾದರು.
ನನಗಿವತ್ತು ತುಂಬ ಸಂತೋಷದ ದಿನ. ಹಿರಿಯರ ಆಶಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ತಾಜ್ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಸಮಾರಂಭದ ಬಳಿಕ ಮಾತನಾಡಿದ ಅವರು, ನಮ್ಮ ಅಜ್ಜಿ-ತಾತ, ಅಪ್ಪ-ಅಮ್ಮನಂತೆ ನಾವೂ ಇರುತ್ತೇವೆ. ಮದುವೆ ಎನ್ನುವುದು ಎಲ್ಲರ ಜೀವನದಲ್ಲಿ ಒಂದು ಮಹತ್ತರವಾದ ಘಟ್ಟ. ಈ ಸಂದರ್ಭದಲ್ಲಿ ನನ್ನನ್ನು ಪ್ರೀತಿಸುವ ಎಲ್ಲರಿಗೂ ಊಟ ಹಾಕಿಸಬೇಕು ಎಂಬ ಆಸೆ ಇತ್ತು. ಅದು ಈಡೇರುತ್ತಿದೆ ಎಂದರು.
ಕಳೆದ ಕೆಲವು ದಿನಗಳಿಂದ ನಾನು ರೇವತಿಯವರೊಂದಿಗೆ ಮಾತನಾಡುತ್ತಿದ್ದೇನೆ. ಸಂಪ್ರದಾಯಸ್ಥ, ಸುಸಂಸ್ಕೃತ ಗುಣಗಳಿರುವ ಹುಡುಗಿ. ತುಂಬ ಚೆನ್ನಾಗಿ ನಮ್ಮೊಂದಿಗೆ ಹೊಂದಿಕೊಂಡು ಹೋಗುತ್ತಾರೆ ಎಂಬ ನಂಬಿಕೆ ಇದೆ. ಇಂತಹ ಹುಡುಗಿ ಸಿಗಲು ನಾನು ಪುಣ್ಯ ಮಾಡಿದ್ದೆ ಎಂದು ನಿಖಿಲ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…