ಸುದ್ದಿ

ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

By admin

May 27, 2019

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ.

ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಕನ್ನಡ ಪತ್ರಿಕೆಯೊಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ ಎಂದು ಹೇಳಿದ್ದಾರೆ.ನಿ

ಖಿಲ್ ಚಾರಿತ್ರ್ಯವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿಯಾಗಿದೆ ಎಂದು ಸಿಎಂ ಹೇಳಿದ್ದಾರೆ.