ಸುದ್ದಿ

ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

159

ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್ ಹೇಗೆ ಹರಡುತ್ತದೆ?

ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೇರಳಕ್ಕೆ ತೆರಳುವವರಿಗೆ ಮಾಸ್ಕ್ ಧರಿಸಿ ತೆರಳಲು ಸೂಚಿಸಲಾಗಿದೆ.

ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …