ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್ ಹೇಗೆ ಹರಡುತ್ತದೆ?
ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಬೇಕು. ಜೊತೆಗೆ ತಮಿಳುನಾಡಿನ ಊಟಿ, ನೀಲಗಿರಿ, ಕನ್ಯಾಕುಮಾರಿ, ಕೊಯಮುತ್ತೂರು, ದಿಂಡಿಗಲ್, ತಿರುವನ್ವೇಲಿ, ತೇಣಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೇರಳಕ್ಕೆ ತೆರಳುವವರಿಗೆ ಮಾಸ್ಕ್ ಧರಿಸಿ ತೆರಳಲು ಸೂಚಿಸಲಾಗಿದೆ.
ಒಟ್ಟಿನಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಸಿದ್ದು, ಎರ್ನಾಕುಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿದೆ. ಹಾಗಾಗಿ ರಾಜ್ಯದ ಗಡಿಭಾಗದಲ್ಲಿ ಭಾರೀ ನಿಗಾ ವಹಿಸಲಾಗಿದೆ.