ಸುದ್ದಿ

‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

35

ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ.

ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ. ಆದ್ದರಿಂದ ಮಾರಾಟ ಮುಂದಕ್ಕೆ ಹೋಗಿತ್ತು.

ಈ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಬಂಡವಾಳ ಹಿಂತೆಗೆತದ ಗುರಿ ಇರಿಸಿಕೊಳ್ಳಲಾಗಿದ್ದು, ಆ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಕಂಪೆನಿಗಳ ಮಾರಾಟವು ಪ್ರಮುಖವಾಗಿದೆ.

“ಈ ವರ್ಷದೊಳಗೆ ಬಂಡವಾಳ ಹಿಂತೆಗೆತ ಪೂರ್ತಿ ಆಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ವಾಸ್ತವ ಸ್ಥಿತಿ ಮುಖ್ಯವಾಗುತ್ತದೆ” ಎಂದು ನಿರ್ಮಲಾ ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.