ಸುದ್ದಿ

‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

32

ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ.

ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ. ಆದ್ದರಿಂದ ಮಾರಾಟ ಮುಂದಕ್ಕೆ ಹೋಗಿತ್ತು.

ಈ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಬಂಡವಾಳ ಹಿಂತೆಗೆತದ ಗುರಿ ಇರಿಸಿಕೊಳ್ಳಲಾಗಿದ್ದು, ಆ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಕಂಪೆನಿಗಳ ಮಾರಾಟವು ಪ್ರಮುಖವಾಗಿದೆ.

“ಈ ವರ್ಷದೊಳಗೆ ಬಂಡವಾಳ ಹಿಂತೆಗೆತ ಪೂರ್ತಿ ಆಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ವಾಸ್ತವ ಸ್ಥಿತಿ ಮುಖ್ಯವಾಗುತ್ತದೆ” ಎಂದು ನಿರ್ಮಲಾ ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ