ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..