ಸುದ್ದಿ

‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

109

ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು.

ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ.

ಇದರ ಜೊತೆಗೆ ಹಿರಿಯರನ್ನು ನೋಡಿಕೊಳ್ಳುವ ಮಕ್ಕಳು ಎಂಬ ವ್ಯಾಪ್ತಿಗೆ ಪುತ್ರರು, ಪುತ್ರಿಯರು ಮತ್ತು ಮೊಮ್ಮಕ್ಕಳ ಬದಲಿಗೆ ಈಗ ಮಕ್ಕಳು, ಮಲಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಮತ್ತು ಅಪ್ರಾಪ್ತರಿಗೂ ವಿಸ್ತರಿಸಲಾಗಿದೆ. ಜೀವನ ನಿರ್ವಹಣೆಗೆ ನೀಡುವ ಮೊತ್ತವನ್ನೂ ಬದಲಾಯಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ