ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..

ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು ಅಂತೀರಾ? ಮುಂದೆ ಓದಿ.

1988 ರ ಡಿಸೆಂಬರ್ 2 ರಂದು ನಡೆದ ಬುಲೆಟ್ ಅಪಘಾತದಲ್ಲಿ ಓಂ ಸಿಂಗ್ ರಾಥೋರ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ತಮ್ಮ ಬೈಕ್ ನಲ್ಲಿ ಅವರು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದು, ಮರವೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿತ್ತು.

ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಪಘಾತಕ್ಕೀಡಾದ ಬೈಕ್ ಅನ್ನು ಪೊಲೀಸ್ ಠಾಣೆಯಲ್ಲಿ ತಂದಿರಿಸಿದ್ದರು. ಆದರೆ ಮಾರನೇ ದಿನ ಬೈಕ್ ಠಾಣೆಯಲ್ಲಿ ಕಾಣಿಸದಿದ್ದಾಗ ಹುಡುಕಿದ ವೇಳೆ ಅಪಘಾತಕ್ಕೀಡಾದ ಸ್ಥಳದಲ್ಲಿ ಅದು ಪತ್ತೆಯಾಗಿತ್ತು. ಸರಿ, ಯಾರೋ ಕಳ್ಳರ ಕೃತ್ಯವೆಂದು ಭಾವಿಸಿದ ಪೊಲೀಸರು ಪುನಃ ಬೈಕ್ ಅನ್ನು ಠಾಣೆಗೆ ತಂದು ಅದರಲ್ಲಿದ್ದ ಪೆಟ್ರೋಲ್ ಖಾಲಿ ಮಾಡಿ ನಿಲ್ಲಿಸಿದ್ದರು.

ಅಚ್ಚರಿಯೆಂಬಂತೆ ಠಾಣೆಯಿಂದ ಕಾಣೆಯಾಗಿದ್ದ ಬೈಕ್ ಮತ್ತೇ ಅಪಘಾತ ಸ್ಥಳದಲ್ಲಿ ಕಂಡು ಬಂದಿತ್ತು. ಪ್ರತಿ ಬಾರಿಯೂ ಇದು ಪುನರಾವರ್ತನೆಯಾಗಿದ್ದು, ಈ ಸುದ್ದಿ ಸುತ್ತಮುತ್ತಲ ಹಳ್ಳಿಯಲ್ಲಿ ಕಾಡ್ಗಿಚ್ಚಿನಂತೆ ಹರಡಿತು.

ಇದು ಓಂ ಸಿಂಗ್ ರಾಥೋರ್ ಪವಾಡವೆಂದೇ ಭಾವಿಸಿದ ಗ್ರಾಮಸ್ಥರು ದೇವಾಲಯ ನಿರ್ಮಾಣ ಮಾಡಿದ್ದಲ್ಲದೇ ಈ ಬೈಕ್ ಅನ್ನು ಅಲ್ಲಿ ನಿಲ್ಲಿಸಿ ನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಈ ದೇವಾಲಯವೀಗ ಬುಲೆಟ್ ಬಾಬಾ ಮಂದಿರವೆಂದೇ ಪ್ರಸಿದ್ದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…