ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್‌ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…