ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ.
ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ ಅನುಭವಿಸಿರುತ್ತಾನೆ

ಜೇಷ್ಠಮದ್ದು ಪುಡಿಯನ್ನು ಬಿಸಿ ಬಿಸಿ ಹಾಲಿಗೆ ಸೇರಿಸಿಕೊಂಡು ದಿನಕ್ಕೆ 2 ಬಾರಿ ಸೇವಿಸಿದರೆ ಒಣಕೆಮ್ಮು ಕಡಿಮೆಯಾಗುತ್ತದೆ.
ಹಸಿಶುಂಠಿ ರಸಕ್ಕೆ ಜೇನುತುಪ್ಪ ಸೇರಿಸಿ ಪದೇ ಪದೇ ಸೇವಿಸಿದರೂ ಒಣ ಕೆಮ್ಮು ಕಡಿಮೆಯಾಗುತ್ತದೆ.

ಒಣಶುಂಠಿ, ಕರಿಮೆಣಸು ಹಾಗೂ ಕಲ್ಲುಸಕ್ಕರೆ ಸೇರಿಸಿ ಪುಡಿ ಮಾಡಿ 2 ಚಿಟಿಕೆ ಅದರ ಪುಡಿಯನ್ನು ಪದೇ ಪದೆ ಬಾಯಗೆ ಹಾಕಿ ಚೀಪಿದರೆ ಒಣಕೆಮ್ಮು ಗುಣವಾಗುತ್ತದೆ.
ಹಸಿ ಈರುಳ್ಳಿ ರಸವನ್ನು ದಿನಕ್ಕೆ 3 ರಿಂದ 4 ಬಾರಿ ಕುಡಿದರೆ ಒಣಕೆಮ್ಮು ಶಮನವಾಗುತ್ತದೆ.

ಮಕ್ಕಳಲ್ಲಿ ಒಣಕೆಮ್ಮಿದ್ದರೆ ಒಣದ್ರಾಕ್ಷಿಯನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ಕಾಲು ಚಮಚದಿಂದ ಅರ್ಧ ಚಮಚ ಕಷಾಯವನ್ನು ಪದೇ ಪದೆ ಕುಡಿಸಿದರೆ ಕೆಮ್ಮು ಬೇಗ ನಿಲ್ಲುತ್ತದೆ.
ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಸುವಿನ ಹಾಲನ್ನು ಬಿಸಿ ಮಾಡಿ ಅದಕ್ಕೆ ಅರ್ಧ ಚಮಚ ಬಾದಾಮಿ ಎಣ್ಣೆ ಬೆರೆಸಿ ಕುಡಿದರೆ ಒಣಕೆಮ್ಮು ಶಮನವಾಗುತ್ತದೆ.

ಬಿಸಿ ಹಾಲಿಗೆ ಅರಿಶಿನ ಹಾಕಿ ಕುಡಿದರೆ ಕೂಡಾ ಶೀಘ್ರವಾಗಿ ಒಣಕೆಮ್ಮು ನಿವಾರಣೆ ಆಗುತ್ತದೆ.
ಮನೆಯಲ್ಲಿಯೇ ಸುಲಭವಾಗಿ ಸಿಗುವ ವಸ್ತುಗಳನ್ನು ಬಳಸಿ ಯಾವುದೇ ಅಡ್ಡಪರಿಣಾಮವಿಲ್ಲದೇ ಸುಲಭವಾಗಿ ಪರಿಹರಿಸಿಕೊಳ್ಳಬಹುದಾಗಿದೆ. ನೀವು ಒಮ್ಮೆ ಪ್ರಯತ್ನಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…