ಉಪಯುಕ್ತ ಮಾಹಿತಿ

ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

396

ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ…

ತಯಾರಿಸಲು ಬೇಕಾಗುವ ಸಾಮಗ್ರಿಗಳು
ಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು
2-3 ಈರುಳ್ಳಿ
3-4 ಹಸಿಮೆಣಸಿನ ಕಾಯಿ
ಸ್ವಲ್ಪ ಕರಿಬೇವು

ಸ್ವಲ್ಪ ಕೊತ್ತಂಬರಿ ಸೊಪ್ಪು
ಎರಡು ಚಮಚ ತುರಿದ ಕ್ಯಾರೇಟ್
ರುಚಿಗೆ ತಕ್ಕಷ್ಟು ಉಪ್ಪು
ಎರಡು ಚಮಚ ಎಣ್ಣೆ

ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ ಕ್ಯಾರೆಟ್, ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ.

ನಂತರ ದೋಸೆ ಹೆಂಚು ಬಿಸಿ ಮಾಡಿ, ಸ್ವಲ್ಪ ಎಣ್ಣೆ ಸವರಿ. ಹೆಂಚು ಕಾದ ಮೇಲೆ ದಪ್ಪವಾಗಿ ದೋಶೆ ಹುಯ್ಯಿರಿ. ಸುತ್ತಲೂ ಎಣ್ಣೆ ಹಾಕಿ ಹದವಾದ ಉರಿಯಲ್ಲಿ ಎರಡೂ ಕಡೆ ಬೇಯಿಸಿದರೆ ನೀವು ಬಯಸುವ ರುಚಿಕರವಾದ ಈರುಳ್ಳಿ ದೋಸೆ ಸಿದ್ಧವಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ