ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ.
ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ ಕಿಚನ್ ಹಾಗೂ ಈಟ್‍ವೆಲ್ ಎಂಬ ಹೋಟೆಲ್ ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.
ಅನರ್ವ್ ಎಂಬವರು ಆನ್‍ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್‍ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್ ಅವರು ಹೇಳಿದ್ದಾರೆ.
ಅದಲ್ಲದೆ ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್‍ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್‍ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್‍ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್‍ಎಸ್‍ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್‍ಗಳನ್ನ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಆನ್‍ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್‍ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್‍ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….