ಆರೋಗ್ಯ, ಉಪಯುಕ್ತ ಮಾಹಿತಿ

ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

455

ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ.

ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ.

ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು ಮೂಲ. ಇದ್ರಲ್ಲಿ ಕ್ಯಾಲೋರಿ ಕಡಿಮೆ ಇರುವುದರಿಂದ ಎಷ್ಟು ಪಪ್ಪಾಯಿ ಸೇವನೆ ಮಾಡಿದ್ರೂ ನಿಮ್ಮ ತೂಕ ಹೆಚ್ಚಾಗುವುದಿಲ್ಲ. ಜೀರ್ಣಶಕ್ತಿಗೂ ಇದು ಒಳ್ಳೆಯದು.

ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಟಾ-ಕ್ಯಾರೋಟಿನ್ ಇದ್ದಲ್ಲಿ ಅಸ್ತಮಾ ಬರುವ ಸಾಧ್ಯತೆ ಕಡಿಮೆ ಇರುತ್ತದೆ. ಪಪ್ಪಾಯದಲ್ಲಿ ಬೀಟಾ-ಕ್ಯಾರೋಟಿನ್ ಅಂಶ ಹೆಚ್ಚಿರುತ್ತದೆ. ಇದು ಅಸ್ತಮಾವನ್ನು ನಿಯಂತ್ರಿಸುತ್ತದೆ.

ಪಪ್ಪಾಯಿಯಲ್ಲಿ ವಿಟಮಿನ್ ಎ, ಬಿ, ಸಿ ಅಂಶವಿರುತ್ತದೆ. ಇದು ಶರೀರದಲ್ಲಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಪಪ್ಪಾಯಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ತಾಮ್ರ ಹೇರಳವಾಗಿರುತ್ತದೆ. ಸಂಧಿವಾತ ಸಮಸ್ಯೆಯಿದ್ದವರು ಪಪ್ಪಾಯ ಸೇವನೆ ಮಾಡುವುದು ಬಹಳ ಮುಖ್ಯ. ಹೃದಯ ಸಂಬಂಧಿ ಖಾಯಿಲೆಗಳನ್ನು ಇದು ದೂರ ಮಾಡುತ್ತದೆ.

ಪಪ್ಪಾಯಿ ಎಲೆಗಳನ್ನು ಸ್ವಚ್ಛವಾಗಿ ತೊಳೆದು ಅದರ ರಸ ತೆಗೆದು ಕುಡಿಯುತ್ತ ಬಂದಲ್ಲಿ ದೇಹದಲ್ಲಿರುವ ಪ್ಲೇಟ್ಲೆಟ್ ಸಂಖ್ಯೆ ಹೆಚ್ಚಾಗುತ್ತದೆ. ಡೆಂಗ್ಯೂನಿಂದ ಬಳಲುತ್ತಿರುವವರಿಗೆ ಇದು ಹೇಳಿ ಮಾಡಿಸಿದ ಮದ್ದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…