ಸುದ್ದಿ

ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

39

 ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ.

ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ.

ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಪಕ್ಷಕ್ಕಾಗಿ ಎಲ್ಲರೂ ರಾಜೀನಾಮೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ಪಕ್ಷಕ್ಕಾಗಿ ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷದ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪಕ್ಷ ರಾಜೀನಾಮೆ ನೀಡಬೇಕೆಂದು ಹೇಳಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇವೆ. ಪಾರ್ಟಿಯ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಇದೂವರೆಗೂ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಒಂದು ವೇಳೆ ಮುಂಬೈಗೆ ತೆರಳುವಂತೆ ಸೂಚಿಸಿದ್ರೆ ಹೋಗುತ್ತೇನೆ. ಇದೂವರೆಗೂ ಆ ರೀತಿಯ ಆದೇಶ ನನಗೆ ತಲುಪಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ಮನವೊಲಿಕೆಗೆ ಸಿದ್ಧ ಎಂಬ ಸಂದೇಶವನ್ನು ಪರೋಕ್ಷವಾಗಿ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ