ಸುದ್ದಿ

ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

105

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ ವಿರಾಮದ ಸಮಯವನ್ನು ಈಗ ಒಬ್ಬರ ದೇಶಭಕ್ತಿಯನ್ನು ಅಳಿಯಲು ಬಳಸಲಾಗುತ್ತದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ಸಭೆ ಸಮಾರಂಭಗಳು ಆರಂಭವಾಗುವ ಮುನ್ನವೇಕೆ ರಾಷ್ಟ್ರಗೀತೆಯನ್ನು ಹಾಕುವುದಿಲ್ಲ? ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಹಾಕಬೇಕು? ದೇಶದಲ್ಲಿರುವ ಎಲ್ಲಾ ಕಚೇರಿಗಳಲ್ಲೂ ರಾಷ್ಟ್ರಗೀತೆ ಮೊಳಗಬೇಕು. ಯಾರು ಕಾನೂನನ್ನು ಮಾಡುತ್ತಾರೋ ಅವರು ಕೂಡ ಅದನ್ನು ಪಾಲಿಸಬೇಕು ಎಂದು ಹೇಳಿದರು.

ಈ ಹಿಂದೆ 2016ರಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಕ್ಕೆ ಜನ ಸೇನಾ ಮುಖ್ಯಸ್ಥರ ಮೇಲೆ ಹೈದರಾಬಾದ್‍ನ ವಕೀಲರೊಬ್ಬರು ದೂರು ದಾಖಲಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ