inspirational

ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

111

ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ.

ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ ಸಹ ಸಮರ್ಪಕವಾಗಿಲ್ಲ ಇಂತಹ ಸಂದರ್ಭದಲ್ಲಿ ಇಂಧನ ದರ ಹೆಚ್ಚಿಸಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಕುರಿತು ಮಂಗಳವಾರವಷ್ಟೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಕೊರೊನಾ ಸಂಕಷ್ಟದ ನಡುವೆ ಜನರಿಗೆ ಬದುಕುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸರಿಯಲ್ಲ, ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ ಎಂದಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ, ಸರ್ಕಾರ ಅದರ ಲಾಭವನ್ನು ಜನರಿಗೆ ನೀಡದೆ, ಇಂತಹ ಕಷ್ಟದ ಸಮಯದಲ್ಲಿ ಬೆಲೆ ಏರಿಸಿ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಬೆಲೆ ಏರಿಕೆಯನ್ನು ಹಿಂಪಡೆದು ಜನರಿಗೆ ಬೆಲೆ ಇಳಿಕೆಯ ಲಾಭ ನೀಡಬೇಕು ಎಂದು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ವಿಸ್ಮಯ ಜಗತ್ತು

    ಭಕ್ತನೊಬ್ಬ ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರವೊಂದನ್ನು ಬರೆದಿದ್ದಾನೆ..!ಆ ಪತ್ರದಲ್ಲಿ ಏನಿತ್ತು ಗೊತ್ತಾ..?

    ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….