ಸುದ್ದಿ

ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

By admin

September 10, 2019

ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ.

ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ.

ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್ ಮಾರಾಟದಲ್ಲಿ ಪ್ರತಿದಿನ ಸುಮಾರು 4,08,000 ಲೀಟರ್ ಕುಸಿತ ಕಂಡಿದ್ದು, 12,45,000 ಲೀಟರ್ ಡೀಸೆಲ್ ಬೇಡಿಕೆ ಕುಸಿದಿದೆಯಂತೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಇದುವರೆಗೂ ರಾಜ್ಯಕ್ಕೆ ಬರುವ ಆದಾಯದಲ್ಲಿ 5 ಕೋಟಿ ರೂಪಾಯಿ ನಷ್ಟವಾಗಿದೆಯಂತೆ.