ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್ ಮತ್ತು ಬಬ್ರೈನ್ ಟ್ಯೂಮರ್ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್ಫೋನ್ ಬಳಕೆಗೆ ಒಂದು ಮಿತಿಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.