ಸುದ್ದಿ

ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

By admin

October 18, 2019

ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ.

ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ.

ಈ ಯಶೋಗಾಥೆಯ ರೂವಾರಿ ಶ್ಯಾಮ್ ಸುಂದರ್ ಪಾಲೀವಾಲ್. ಅವರು ಪಿಪ್ಲಾಂತ್ರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದಾಗ 2006ರಲ್ಲಿ ಕಿರಣ್ ನಿಧಿ ಯೋಜನೆ ಸೇರಿದಂತೆ ವಿವಿಧ ಕೆಲಸಕಾರ್ಯಗಳನ್ನು ಕೈಗೆತ್ತಿಕೊಂಡರು.

ಹಾಲಿ ಪಿಪ್ಲಾಂತ್ರಿ ಜಲಾನಯನ ಸಮಿತಿಯ ಅಧ್ಯಕ್ಷರಾಗಿರುವ ಶ್ಯಾಮ್ ಸುಂದರ್ ಪಾಲೀವಾಲ್ ಅವರು ಹೇಳುವಂತೆ, “ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಸಂಪೂರ್ಣ ಸದುಪಯೋಗಪಡಿಸಿಕೊಂಡು ಪಿಪ್ಲಾಂತ್ರಿಯ ಸರ್ವಾಂಗೀಣ ಪ್ರಗತಿ ಸಾಧಿಸಲಾಗಿದೆ.