ಸುದ್ದಿ

ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

33

ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್ ರಸ್ತೆ, ಸದಾಶಿವನಗರ, ನೇಚರ್ಸ್ ಬ್ಯಾಸ್ಕೆಟ್, ನಾಮ್ ದಾರಿ, ನಿಲಗೀರಿಸ್ ಸೂಪರ್ ಮಾರ್ಕೆಟ್ ಗಳ ಮೇಲೆ ದಾಳಿ  ನಡೆಸಿದ  ಸುಧಾಕರ್, ಪ್ಲಾಸ್ಟಿಕ್ ಬಳಕೆ ಕಂಡು ಗರಂ ಆದರು. ದೊಡ್ಡ ದೊಡ್ಡ ಮಳಿಗೆಗಳು ಹಾಗೂ ಕಂಪನಿಗಳು ಮೊದಲು ಕಾನೂನು ಪಾಲಿಸಬೇಕು. ಇವರೇ ಪ್ರಾರಂಭಿಸಿಲ್ಲ ಅಂದರೆ ಇನ್ನಿತರ ಚಿಕ್ಕ ಅಂಗಡಿಗಳು ಹೇಗೆ ಅನುಸರಿಸುತ್ತಾರೆ. ಅಂತಹ ಮಳಿಗೆಗಳಿಗೆ ಎಚ್ಚರಿಕೆ ನೀಡಿದ್ದು, ಬಟ್ಟೆ ಬ್ಯಾಗ್ ಗಳನ್ನು ಬಳಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್, ಪ್ರತಿನಿತ್ಯ ದಾಳಿ ನಡೆಸುವುದಾಗಿ ತಿಳಿಸಿದರು.  ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ರದ್ದುಗೊಳಿಸಲಾಗಿದ್ದು, ಪೇಪರ್ ಬ್ಯಾಗ್ ಮತ್ತು ಬಾಳೆ ಎಲೆಗಳನ್ನು ಬಳಸುತ್ತಿರುವುದಾಗಿ ನೇಚರ್ ಬ್ಯಾಸ್ಕೆಟ್ ಕಂಪನಿಯವರು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…