ಸುದ್ದಿ

ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

29

ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು.

ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ ಹಾಗೂ ಬಳಕೆ ಕಂಡು ಬಂದರೆ ಅಂತವರ ವಿರುದ್ದ 1 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ, ನೈರ್ಮಲ್ಯ ಕಾಪಾಡುವ  ಜೊತೆಗೆ ನಗರ ಸಭೆಯೊಂದಿಗೆ ಸಹಕಾರಿಸಬೇಕು ಎಂದು ಶಾಸಕ ವೆಂಕಟರಾವ ನಾಡಗೌಡ ಮನವಿ ಮಾಡಿದರು.

ನಗರದ ನಗರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಅಂಗವಾಗಿ  ನಡೆಸಿದ  ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ, ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಮನೆಗಳ ಫಲಾನುಭವಿಗಳಿಗೆ ಆರೋಗ್ಯ, ನೈರ್ಮಲ್ಯ, ನೀರು ಸಂರಕ್ಷಣೆ, ಮಳೆನೀರು ಕೊಯ್ಲು, ಗಿಡ ಮರಗಳನ್ನು ನೆಡುವದು,ಪರಿಸರ ಸಂಪನ್ಮೂಲಗಳ ಸಂರಕ್ಷಣೆ, ಸೌರಶಕ್ತಿ ಬಳಕೆ, ಹೊಗೆ ರಹಿತ ಅಡುಗೆ ಮನೆ, ಸಮುದಾಯದೊಂದಿಗೆ ಸಹಬಾಳ್ವೆ, ಸಹಿಷ್ಣುತೆ ವಿವಿಧ ಇಲಾಖೆಯಡಿ ದೊರೆಯುವ ಸೌಲಭ್ಯ

ಮುಂತಾದವುಗಳ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ಮೂರು ತಿಂಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಅಂಗೀಕಾರ ಸಂಪನ್ಮೂಲ ವ್ಯಕ್ತಿಗಳನ್ನು ನೇಮಕ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಉಪಯುಕ್ತ ಮಾಹಿತಿ

    ಬ್ಯಾಂಕ್’ಗಳಿಂದ ಸಾಲ ಪಡೆದುಕೊಂಡ ಗ್ರಾಹಕರಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…