ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

212

ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಆರೋಪಿಗೆ 20 ವರ್ಷ ಸಜೆ ಮತ್ತೆ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ, 5ವರ್ಷ ಸಜೆ

ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಲೂರು ತಾಲ್ಲುಕು, ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್‌ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ, 2ನೇ ಆರೋಪಿಗೆ 5ವರ್ಷ ಸಜೆ ಮತ್ತು ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ