ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.
15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.
ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….