ಸುದ್ದಿ

ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

32

 

ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು.

ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಆ.21 ರಂದು ಕ್ಯಾತಸಂದ್ರ ವ್ಯಾಪ್ತಿಯ ಹಿರೇಗಹಳ್ಳಿ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿರುವ ಸಿಂಗೋನಹಳ್ಳಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬೈಕನ್ನು ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿ ಕ್ಯಾತಸಂದ್ರ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.

ಈತನಿಂದ 5 ಲಕ್ಷ ರೂ. ಮೌಲ್ಯದ 14 ಮೋಟಾರ್‍ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. 2016ರಲ್ಲಿ ಗೌರಿಬಿದನೂರು ಪೊಲೀಸರು ಈತನನ್ನು ಬಂಧಿಸಿ 18 ಬೈಕ್‍ಗಳನ್ನು ವಶಪಡಿಸಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.ಆರೋಪಿ ವಿರುದ್ಧ ಗೌರಿಬಿದನೂರು, ದೊಡ್ಡಬಳ್ಳಾಪುರ, ಯಲಹಂಕ ಠಾಣೆಗಳಲ್ಲೂ ಸಹ ಕಳವು ಪ್ರಕರಣಗಳು ದಾಖಲಾಗಿವೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಹೆಚ್ಚುವರಿ ಎಸ್‍ಪಿ ಡಾ.ಶೋಭಾರಾಣಿ ಮಾರ್ಗದರ್ಶನದಲ್ಲಿ ನಗರ ಉಪವಿಭಾಗದ ಪೊಲೀಸ್ ಉಪಅಧೀಕ್ಷಕ ತಿಪ್ಪೇಸ್ವಾಮಿ, ಕ್ಯಾತಸಂದ್ರ ವೃತ್ತನಿರೀಕ್ಷಕರಾದ ಶ್ರೀಧರ್ ನೇತೃತ್ವದಲ್ಲಿ ಪಿಎಸ್‍ಐ ರಾಜು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿಕೃಷ್ಣ ಆಭಿನಂದಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…