ಸುದ್ದಿ

ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

22

ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ.

ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ.

ವಾಹನ ಚಾಲನೆ ಮಾಡುವಾಗ ಸೆಲ್ಯೂಟ್ ಹೊಡೆಯಲು ಮುಂದಾದರೆ ಅಪಘಾತವಾಗುವ ಸಾಧ್ಯತೆ ಹೆಚ್ಚು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.

ಅಲ್ಲದೆ ಪೊಲೀಸರೇ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವ ಕಾರಣಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶವೂ ಈ ಕಟ್ಟುನಿಟ್ಟಿನ ಆದೇಶದ ಹಿಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….