ಸುದ್ದಿ

ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

By admin

September 30, 2019

ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ.

ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ.

ವಾಹನ ಚಾಲನೆ ಮಾಡುವಾಗ ಸೆಲ್ಯೂಟ್ ಹೊಡೆಯಲು ಮುಂದಾದರೆ ಅಪಘಾತವಾಗುವ ಸಾಧ್ಯತೆ ಹೆಚ್ಚು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.

ಅಲ್ಲದೆ ಪೊಲೀಸರೇ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವ ಕಾರಣಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶವೂ ಈ ಕಟ್ಟುನಿಟ್ಟಿನ ಆದೇಶದ ಹಿಂದಿದೆ.