ಸುದ್ದಿ

ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

29

ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್‍ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್‍ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…