ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್.
ಪೋಸ್ಟ್‌ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.
ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ.
2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.