ಸುದ್ದಿ

ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

58

ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.

ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ