ಸುದ್ದಿ

ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

57

ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.

ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…